ಗಮನಿಸಿ : IAS ಮತ್ತು KAS ಪರೀಕ್ಷೆಗಳಿಗೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.20ರ ವರೆಗೆ ವಿಸ್ತರಿಸಲಾಗಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಆಸಕ್ತ ಆಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ನ https://sevasindhuservices.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ತರಬೇತಿಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read