ಗಮನಿಸಿ : ಅಲ್ಪಸಂಖ್ಯಾತ ಸಮುದಾಯದ ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಒಂದರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎನ್ಎಸ್ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್ಎಸ್ಪಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ಪ್ರೆಶ್)ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್ಎಸ್ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read