ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ 60 ದಿನಗಳ ವಸತಿ ಸಹಿತ ಪೊಲೀಸ್ ಕಾನ್ಸಟೇಬಲ್ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೈಬ್ಸೈಟ್ https://dom.Karnataka.gov.in ನಲ್ಲಿ ಅರ್ಜಿ ನಮೂನೆಯನ್ನು ಪಡೆದು, ನಿಗದಿಪಡಿಸಿದ ಮಾರ್ಗಸೂಚಿಗಳನ್ವಯ ಅಕ್ಟೋಬರ್ 3, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.