HomeLive Newsಗಮನಿಸಿ : ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಹಾಗೂ ಪಾರ್ಸಿ) ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ ವಿತರಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಪಿ.ಎಂ.ಅಜಯ್ ಯೋಜನೆಯಡಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಜಾತಿಯ 500 ಫಲಾನುಭವಿಗಳಿಗೆ ಭಾರೀ ವಾಹನ ಚಾಲನಾ ತರಬೇತಿ ನೀಡಿ, ಸಾರಿಗೆ ಇಲಾಖೆಯ ಪರವಾನಗಿ ನೀಡುವ ಕಾರ್ಯವು ನಿಗಮದ ತರಬೇತಿ ಕೇಂದ್ರಗಳಲ್ಲಿ ಪ್ರಗತಿಯಲ್ಲಿದ್ದು, ಫಲಾನುಭವಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ, ಅಲ್ಪಸಂಖ್ಯಾತ ನಿರ್ದೇಶನಾಲಯವು ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಹಾಗೂ ಪಾರ್ಸಿ) ಅಭ್ಯರ್ಥಿಗಳಿಗೂ ಸಹ ಉಚಿತ ಭಾರೀ / ಲಘು ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಳ್ಳಲು ತಿಳಿಸಿದ್ದು, ಅದರಂತೆ ದಿನಾಂಕ 23/03/2026 ರಿಂದ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತರಬೇತಿ ಪ್ರಾರಂಭ: ದಿನಾಂಕ 23/03/2026 ರಿಂದ.

ಅರ್ಹತೆ: ಅಭ್ಯರ್ಥಿಗಳು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಮತ್ತು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ಸೌಲಭ್ಯಗಳು: ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ. ತರಬೇತಿಯ ಅವಧಿ ಒಂದು ತಿಂಗಳು.

ಪರವಾನಗಿ: ಸಾರಿಗೆ ಇಲಾಖೆಯ (RTO) ಸಹಯೋಗದೊಂದಿಗೆ ಉಚಿತವಾಗಿ ಚಾಲನಾ ಪರವಾನಗಿ ನೀಡಲಾಗುವುದು.

ಅರ್ಜಿ ಸಲ್ಲಿಕೆ: ಆಸಕ್ತರು ಹತ್ತಿರದ ತರಬೇತಿ ಕೇಂದ್ರಕ್ಕೆ ಭೇಟಿ ನೀಡಬಹುದು ಅಥವಾ ksrtcjobs.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular