HomeKarnatakaಗಮನಿಸಿ : ಮದರಸಗಳಿಗೆ ಔಪಚಾರಿಕ-ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಗಮನಿಸಿ : ಮದರಸಗಳಿಗೆ ಔಪಚಾರಿಕ-ಗಣಕೀಕೃತ ಶಿಕ್ಷಣ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸುತ್ತಿರುವ ಮುಸ್ಲಿಂ ಸಮುದಾಯದ ನೋಂದಾಯಿತ ಮದರಸಗಳಿಗೆ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://dom.karnataka.gov.in ಲಿಂಕ್ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬಹುದಾಗಿದ್ದು ಜ.20 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಪ್ರಸ್ತಾವನೆ ಸಲ್ಲಿಸುವ ಮದರಸಗಳು ವಕ್ಫ್ ಮಂಡಳಿಯಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಹಾಗೂ ಮದರಸಾ ಕುರಿತು ಸವಿಸ್ತಾರವಾದ ವಿವರ ನೀಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ, ಶಿವಮೊಗ್ಗ ದೂ.ಸಂ: 08182-220206 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular