HomeKarnatakaಗಮನಿಸಿ : ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಗಮನಿಸಿ : ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆ 2022-23ನೇ ಸಾಲಿಗೆ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಮಧ್ಯಮ ವರ್ಗದ ಆರ್ಎಎಸ್ ಘಟಕ ನಿರ್ಮಾಣ(ಮಹಿಳೆಯರಿಗೆ), ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ. ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂ. 21 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular