HomeKarnatakaಗಮನಿಸಿ : 2024-25 ನೇ ಸಾಲಿನ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಗಮನಿಸಿ : 2024-25 ನೇ ಸಾಲಿನ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25 ನೇ ಸಾಲಿನ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ / ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ, ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಿಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ” ರಾಜ್ಯ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆಗಳನ್ನು ಇಲಾಖೆಯ ವೆಬ್ ಸೈಟ್ : www.dwdsc.karnataka.gov.in ಗೆ ಬೇಟಿ ನೀಡಿ ಅರ್ಜಿಗಳನ್ನು ಪಡೆದು ಕನ್ನಡ ಭಾಷೆಯಲ್ಲಿ ದ್ವಿಪತ್ರಿಗಳಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ದಿನಾಂಕ: 15-10-2024 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ- 560029, ದೂರವಾಣಿ ಸಂಖ್ಯೆಯ: 080-29752324 ಗೆ ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular