HomeKarnatakaಗಮನಿಸಿ : ಕಾನ್ಸ್ ಟೇಬಲ್ ಪರೀಕ್ಷೆಗೆ ‘ವಸ್ತ್ರ ಸಂಹಿತೆʼ ಪ್ರಕಟ ; ಅಭ್ಯರ್ಥಿಗಳಿಗೆ ಈ...

ಗಮನಿಸಿ : ಕಾನ್ಸ್ ಟೇಬಲ್ ಪರೀಕ್ಷೆಗೆ ‘ವಸ್ತ್ರ ಸಂಹಿತೆʼ ಪ್ರಕಟ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬಳ್ಳಾರಿ : 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಫೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜೀತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ.

ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ

ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್ಗಳು, ದೊಡ್ಡ ಬಟನ್ಗಳು ಇರುವ ಶರ್ಟ್ಗಳನ್ನು ಧರಿಸುವಂತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಮತ್ತು ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.

ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆಯೊಂದಿಗೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular