HomeLatest Newsರಾಜ್ಯದ ಜನತೆ ಗಮನಕ್ಕೆ : ಇಂದು ಮತ್ತು ನಾಳೆ 'ಎಸ್ಕಾಂ' ಆನ್ ಲೈನ್ ಸೇವೆ ಸ್ಥಗಿತ,...

ರಾಜ್ಯದ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಬಂದ್.!


ಬೆಂಗಳೂರು: ಅ.24 ರಿಂದ ರಾಜ್ಯದಲ್ಲಿ 2 ದಿನ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದ್ದು, ಬಿಲ್ ಪಾವತಿಯೂ ಬಂದ್ ಆಗಲಿದೆ
.

ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್ಲೈನ್ ಸೇವೆ ಅಲ್ಲಭ್ಯವಾಗಿರುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

ಅ.24 ರಂದು ರಾತ್ರಿಯಿಂದ 8 ಗಂಟೆಯಿಂದ 17 ಗಂಟೆಗಳ ಕಾಲ ಸೇವೆ ಲಭ್ಯವಿರುವುದಿಲ್ಲ. ಅ.24 ರಂದು ರಾತ್ರಿ 8 ಗಂಟೆಯಿಂದ ಅ.25 ರ ಮಧ್ಯಾಹ್ನ 1 ಗಂಟೆವರೆಗೆ ಐದು ಎಸ್ಕಾಂಗಳಲ್ಲಿ ಆನ್ ಲೈನ್ ಸೇವೆ ಅಲಭ್ಯವಾಗಿರಲಿದೆ.
ರಾಜ್ಯದ 5 ಎಸ್ಕಾಂಗಳಲ್ಲಿ ನಗರ ವ್ಯಾಪ್ತಿಯ ಗ್ರಾಹಕರಿಗೆ ವಿದ್ಯುತ್ ಬಿಲ್ ಸೇರಿದಂತೆ ಯಾವುದೇ ಸೇವೆ ಲಭ್ಯವಿರುವುದಿಲ್ಲ.ಎಸ್ಕಾಂಗಳ ನಗರ ವ್ಯಾಪ್ತಿಯ ಗ್ರಾಹಕರಿಗೆ (ಆರ್ಎಪಿಡಿಆರ್ಪಿ) ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಮೀಟರ್ ಬದಲಾವಣೆ, ಹೊಸ ಸಂಪರ್ಕಕೆ ಅರ್ಜಿ ಸಲಿಕೆ ಸೇರಿದಂತೆ ಯಾವುದೇ ಆನ್ಲೈನ್ ಸೇವೆ ಲಭ್ಯ ಇರಲ್ಲ..ಆನ್ಲೈನ್ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸ ಸಂಪರ್ಕ ಸೇವೆ ಇರುವುದಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಲ್ ಪಾವತಿಗಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೌಂಟರ್ ಗಳಲ್ಲಿ ಎರಡು ದಿನ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.

ಬೆಸ್ಕಾಂ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಉಪ ವಿಭಾಗಗಳು, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚೆನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್ , ಹರಪ್ಪನಹಳ್ಳಿ, ಹರಿಹರ, ಹಿರಿಯೂರು ಮತ್ತು ತಿಪಟೂರು ನಗರ.

ಸೆಸ್ಕ್ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು

ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಗುಲ್ಬರ್ಗ ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ಹೊಸಪೇಟೆ.

ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಲ್, ದಾಂಡೇಲಿ, ಇಂಡಿ, ಸೌದತ್ತಿ, ಸೇವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಾಪುರ ನಗರ ಉಪ ವಿಭಾಗಗಳ ವ್ಯಾಪ್ತಿಗಳಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular