ಬೆಂಗಳೂರು: ಜುಲೈ 25 ರಿಂದ ರಾಜ್ಯದಲ್ಲಿ 2 ದಿನ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದ್ದು, ಬಿಲ್ ಪಾವತಿಯೂ ಬಂದ್ ಆಗಲಿದೆ.
ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್ಲೈನ್ ಸೇವೆ ಅಲ್ಲಭ್ಯವಾಗಿರುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.
ಜುಲೈ 25ರಂದು ರಾತ್ರಿ 8.30 ರಿಂದ ಜುಲೈ 27ರಂದು ರಾತ್ರಿ 10 ಗಂಟೆಯವರೆಗೆ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಆನ್ಲೈನ್ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸ ಸಂಪರ್ಕ ಸೇವೆ ಇರುವುದಿಲ್ಲ ಎಂದು ಹೇಳಲಾಗಿದೆ.
ಬಿಲ್ ಪಾವತಿಗಾಗಿ ಬಳಸುವ ಎಲ್ಲಾ ಎಸ್ಕಾಂಗಳ ಜಾಲತಾಣ, ಬೆಸ್ಕಾಂ ಮಿತ್ರ ಮೊಬೈಲ್ ಆಪ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೌಂಟರ್ ಗಳಲ್ಲಿ ಎರಡು ದಿನ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ. ಬೆಸ್ಕಾಂ, ಸೆಸ್ಕ್, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂಗಳ ವಿವಿಧ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಎರಡು ದಿನ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎನ್ನಲಾಗಿದೆ.
ಜು.25 ರಿಂದ ಜು.27ರವರೆಗೆ 2 ದಿನಗಳ ಕಾಲ ರಾಜ್ಯದ 5 ಎಸ್ಕಾಂಗಳ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಆನ್ಲೈನ್ ಸೇವೆ ಸ್ಥಗಿತಗೊಳ್ಳಲಿವೆ. ಜು.25ರ ರಾತ್ರಿ 8.30 ಗಂಟೆಯಿಂದ ఋ.27 ರವರೆಗೆ ರಾತ್ರಿ 10 ಗಂಟೆವರೆಗೆ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ ಹಾಗೂ ಹೊಸ ಸಂಪರ್ಕಕ್ಕೆ ಅರ್ಜಿ ಸಲ್ಲಿಕೆ ಸೇರಿ ಯಾವುದೇ ಆನ್ಲೈನ್ ಆಧರಿತ ಸೇವೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.