ಗಮನಿಸಿ : ಸಶಸ್ತ್ರ ಮೀಸಲು ಪೊಲೀಸ್ ಪಡೆಯ 420 ಹುದ್ದೆಗಳಿಗೆ ಸೆ.10 ರಂದು ಪರೀಕ್ಷೆ|Karnataka Police Recruitment

ಬೆಂಗಳೂರು: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್ ಮತ್ತು ಡಿಎಎಆರ್)ಯಲ್ಲಿ ಖಾಲಿ ಇರುವ 420 ಹುದ್ದೆಗಳಿಗೆ ಸೆ.10ರಂದು ಪರೀಕ್ಷೆ ನಡೆಯಲಿದೆ.

ಬೆಂಗಳೂರು ನಗರ, ಚಿತ್ರದುರ್ಗ, ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆ , ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11ರಿಂದಮಧ್ಯಾಹ್ನ 12.30 ರವರೆಗೆ ಪರೀಕ್ಷೆ ನಡೆಯಲಿದೆ.
ಲಿಖಿತ ಪರೀಕ್ಷೆಗೆ ಬರೆಯಲಿರುವ ಅಭ್ಯರ್ಥಿಗಳಿಗೆ ಹಾಲ್ ಟಿಕೆಟ್ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಹಾಲ್ ಟಿಕೆಟ್ ಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆ ದಿನಾಂಕ, ಸ್ಥಳದ ಬಗ್ಗೆ ನಿಗದಿಪಡಿಸಿಕೊಳ್ಳಿ ಎಂದು ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಯಡಾ ಮಾರ್ಟಿಲ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read