HomeKarnatakaಗಮನಿಸಿ : `ನಿರುದ್ಯೋಗ, ಶಿಶುಪಾಲನಾ ಭತ್ಯೆ ಸೇರಿ ವಿವಿಧ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ...

ಗಮನಿಸಿ : `ನಿರುದ್ಯೋಗ, ಶಿಶುಪಾಲನಾ ಭತ್ಯೆ ಸೇರಿ ವಿವಿಧ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಇಲಾಖೆಯ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ  ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ  ಅರ್ಜಿ ಸಲ್ಲಿಕೆಗೆ ನವೆಂಬರ್ 15 ಅನ್ನು ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಪ್ರಸ್ತುತ ಈ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹ ಫಲಾನುಭವಿಗಳು ಸುವಿಧಾ ತಂತ್ರಾAಶ :  URL:https://suvidha.karnataka.gov.in/      ಮೂಲಕ ಆನ್‌ಲೈನ್‌ನಲ್ಲಿ ಡಿ.15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು.

For Latest News Updates, Join Our Whatsapp Community🚩
RELATED ARTICLES

Most Popular