HomeKarnatakaಗಮನಿಸಿ : 'KEA' ನಿಗಮ- ಮಂಡಳಿಗಳ ಹುದ್ದೆ ಭರ್ತಿಗೆ ಅ. 28, 29 ರಂದು ಪರೀಕ್ಷೆ...

ಗಮನಿಸಿ : ‘KEA’ ನಿಗಮ- ಮಂಡಳಿಗಳ ಹುದ್ದೆ ಭರ್ತಿಗೆ ಅ. 28, 29 ರಂದು ಪರೀಕ್ಷೆ ನಿಗದಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗಮ-ಮಂಡಳಿಗಳ ಹುದ್ದೆಗಳ ಭರ್ತಿಗೆ ಅ.28, 29 ರಂದು ಪರೀಕ್ಷೆ ನಿಗದಿ ಮಾಡಿದೆ.

ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸಹಿತ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅ.28 ಮತ್ತು 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಅಭ್ತರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಮೈಸೂರು ಸೇಲ್ಸ್ ಇಂಟನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಖಾಲಿ ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳ ಹುದ್ದೆಗೆ ಕೆಇಎ ಪರೀಕ್ಷೆ ನಡೆಸುತ್ತಿದೆ.ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಡೌನ್ಲೋಡ್ ಆಗಿದ್ದು, ಕೆಲವರಿಗೆ ಅ.28 ಮತ್ತು 29- ಈ ಎರಡೂ ದಿನಾಂಕಗಳಂದು ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು ಅಂತಹವರು ಎರಡೂ ಕಡೆ ಪರೀಕ್ಷೆ ಬರೆಯಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಅಭ್ಯರ್ಥಿಗಳಿಗೆ ಒಂದೇ ದಿನ ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಜಿಲ್ಲೆಗಳಲ್ಲಿ ಅಥವಾ ಪ್ರತ್ಯೇಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಪ್ರವೇಶ ಪತ್ರ ಡೌನ್ಲೋಡ್ ಆಗಿದೆ. ಅಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರು ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯತಕ್ಕದ್ದು. ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular