HomeLatest Newsಗಮನಿಸಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ: ‘ಯೆಲ್ಲೋ ಅಲರ್ಟ್’

ಗಮನಿಸಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ: ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಸೆಪ್ಟೆಂಬರ್ 16, 17ರಂದು ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.

ಸೆ. 18ರಂದು ಕರಾವಳಿ ಜಿಲ್ಲೆಗಳು, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸೆಪ್ಟಂಬರ್ 19 ರಿಂದ 22 ರವರೆಗೆ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular