HomeKarnatakaಗಮನಿಸಿ : 'ಸಿ-ವಿಜಿಲ್' ಆಪ್ ನಲ್ಲಿ ಚುನಾವಣಾ ದೂರು ನೀಡುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಗಮನಿಸಿ : ‘ಸಿ-ವಿಜಿಲ್’ ಆಪ್ ನಲ್ಲಿ ಚುನಾವಣಾ ದೂರು ನೀಡುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ.

ಇತ್ತೀಚಿನ ದಿನಗಳಲ್ಲಿ ಎಲ್ಲರ ಬಳಿಯು ಸ್ಮಾರ್ಟ್ಫೋನ್ ಇರುವುದು ಸಹಜ. ಅಂಗೈ ತುದಿಯಲ್ಲಿ ಎಲ್ಲ ವೀಕ್ಷಿಸಬಹುದು ಮತ್ತು ಸೆರೆಹಿಡಿಯಬಹುದು. ಸಿ-ವಿಜಿಲ್ ನೊಂದಿಗೆ, ನಿಮ್ಮ ಸ್ಮಾರ್ಟ್ಫೋನ್ ನಿಂದ ನೇರವಾಗಿ ಮಾದರಿ ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಗಳನ್ನು ನೀವು ವರದಿ ಮಾಡಬಹುದು. ಅದು ಮತದಾರರ ಯಾವುದೇ ಆಮಿಷಗಳ ಅಥವಾ ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗ ಅಥವಾ ಯಾವುದೇ ರೀತಿಯ ಉಲ್ಲಂಘನೆಯಾಗಿರಬಹುದು. ನಿಮ್ಮ ವರದಿಯು ನಮ್ಮ ಚುನಾವಣೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ಸಹಾಯ ಮಾಡುತ್ತದೆ.

ಮತಕ್ಕಾಗಿ ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೋರೆಗಳನ್ನು ಹಂಚುವವರನ್ನು ಪೆÇೀಲಿಸರಿಗೆ ತಿಳಿಸುವುದು ಹೇಗೆ? ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದನ್ನು ಹೇಗೆ ತಡೆಗಟ್ಟಬೇಕು ಎಂಬ ಹಲವು ಪ್ರಶ್ನೆಗಳು ಇದ್ದಲ್ಲಿ ಸಿ-ವಿಜಿಲ್ ಆಪ್ (ಸಿಟಿಜನ್-ವಿಜಿಲ್) ಮೂಲಕ ದೂರು ನೀಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿ-ವಿಜಿಲ್ ಆಪ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಮೊದಲು ಗೂಗಲ್ ಪ್ಲೇಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ನಿಂದ ಸಿ-ವಿಜಿಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ. ನೀವು ಸಾಕ್ಷಿಯಾಗಿರುವ ಯಾವುದೇ ಚುನಾವಣಾ ಸಂಬಂಧಿತ ಉಲ್ಲಂಘನೆಗಳ ಫೆÇೀಟೋಗಳು ಅಥವಾ ವೀಡಿಯೊಗಳನ್ನು ಸೆರೆಹಿಡಿಯಿರಿ. ನಿಮ್ಮ ವರದಿಯನ್ನು ಅಪ್ಲಿಕೇಶನ್ ಮೂಲಕ ಅಪ್ಲೋಡ್ ಮಾಡಿ, ಘಟನೆ ಮತ್ತು ಸ್ಥಳದ ವಿವರಗಳನ್ನು ಒದಗಿಸಿ. ನಿಮ್ಮ ವರದಿಯನ್ನು ಕ್ರಮಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ರವಾನಿಸಲಾಗುತ್ತದೆ.

*ಸಿ-ವಿಜಿಲ್ ಆಪ್ ಕಾರ್ಯ ಹೇಗೆ?

ಆಪ್ ಓಪನ್ ಮಾಡಿದಾಗ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಹಣ, ಮದ್ಯ, ಉಡುಗೊರೆಗಳನ್ನು ಹಂಚುವ ಸಂದರ್ಭದಲ್ಲಿ ಸಾರ್ವಜನಿಕರು  ಫೋಟೋ  ಮತ್ತು ವಿಡಿಯೋವನ್ನು (2 ನಿಮಿಷ) ಸೆರೆಹಿಡಿದು ಈ ಆಪ್ನಲ್ಲಿ ಅಪ್ಲೋಡ್ ಮಾಡಬಹುದು. ಅಲ್ಲಿನ ವಿಳಾಸವನ್ನು ನಮೂದಿಸಬೇಕು. ಜೊತೆಗೆ ಇದು ಸಂಪೂರ್ಣ ಉಚಿತವಾಗಿರಲಿದೆ.

*ಏನೆಲ್ಲಾ ದೂರು ನೀಡಬಹುದು?

ವ್ಯಕ್ತಿಯೊಬ್ಬರು ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಹಣ ವಿತರಣೆ ಮಾಡಿದರೆ, ಉಡುಗೋರೆ, ಮದ್ಯ ಹಂಚಿಕೆ, ಅನುಮತಿ ಪಡೆಯದೇ ಬ್ಯಾನರ್ ಅಥವಾ ಪೆÇೀಸ್ಟರ್, ಬೆದರಿಕೆ ಹಾಕುವುದು, ಬಂದೂಕು ಪ್ರದರ್ಶನ, ಧಾರ್ಮಿಕ ಅಥವಾ ಕೋಮು ಕುರಿತು ಪ್ರಚೋದಾರಿತ ಭಾಷಣ, ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿμÉೀಧದ ಅವಧಿಯಲ್ಲೂ ಪ್ರಚಾರ, ಮತದಾನದ ದಿನದಂದು ಮತದಾರರನ್ನು ಸಾಗಿಸುವುದು.. ಹೀಗೆ ಯಾವುದೇ ರೀತಿ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಈ ಆಪ್ನಲ್ಲಿ ದೂರು ಕೊಡಬಹುದು. ಒಟ್ಟು 16 ರೀತಿಯ ದೂರುಗಳನ್ನು ನೀಡಬಹುದು.

*100 ನಿಮಿಷಗಳಲ್ಲಿ ಸಿಗಲಿದೆ ಉತ್ತರ

ಆಪ್ನಲ್ಲಿ ದಾಖಲಿಸುವ ದೂರುಗಳ ಬಗ್ಗೆ ಜಿಲ್ಲಾ ಮಟ್ಟದ ಸಿ-ವಿಜಿಲ್ ನೋಡೆಲ್ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕರ ದೂರುಗಳಿಗೆ 100 ನಿಮಿಷಗಳ ಒಳಗೆ ಅಧಿಕಾರಿಗಳ ಉತ್ತರ ಸಿಗಲಿದೆ. ಇದರಿಂದ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಆಮಿಷಗಳು ಸಾಕ್ಷಿ ಸಮೇತ ದಾಖಲಾಗಲಿವೆ.

ದೂರಿನೊಂದಿಗೆ ಸೆರೆಹಿಡಿಯಲಾದ ಜಿಪಿಎಸ್ ಮಾಹಿತಿಯು ಅದನ್ನು ಸಂಬಂಧಪಟ್ಟ ಜಿಲ್ಲಾ ನಿಯಂತ್ರಣ ಕೊಠಡಿಗೆ ಸ್ವಯಂಚಾಲಿತವಾಗಿ ಫ್ಲಾಗ್ ಮಾಡುತ್ತದೆ. ಫ್ಲೈಯಿಂಗ್  ಸ್ಕ್ವಾಡ್  ತಂಡಗಳನ್ನು ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ರವಾನಿಸಲು ಅನುವು ಮಾಡಿಕೊಡುತ್ತದೆ.

ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಈಗಾಗಲೇ ಕಂಟ್ರೋಲ್ ರೂಂ ಮತ್ತು ಸಿ-ವಿಜಿಲ್ ತಂಡ ಕಾರ್ಯಗತವಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯ (ಮಾ.26)ವರೆಗೆ ಒಟ್ಟು 37 ದೂರುಗಳು ಸಿ-ವಿಜಿಲ್ ಮುಖಾಂತರ ದಾಖಲಾಗಿದ್ದು, 19 ಪ್ರಕರಣಗಳು ವಿಲೇ ಮಾಡಲಾಗಿದೆ.

‘ದೂರು ನೀಡುವಾಗ ದೂರುದಾರರ ಹೆಸರು, ವಿಳಾಸವನ್ನು ಗೌಪ್ಯವಾಗಿ ಇಡಲಾಗುತ್ತದೆ. ಚುನಾವಣೆ ಮುಗಿಯುವವರೆಗೂ ಮೂರು ಪಾಳಿಗಳಲ್ಲಿ 24 ಗಂಟೆಗೂ ಚುನಾವಣಾ ಸಿಬ್ಬಂದಿ ಕಾರ್ಯ ನಿರ್ವಹಿಸುವರು’ ಎಂದು ಜಿಲ್ಲಾ ಸಿ-ವಿಜಿಲ್ ನೋಡೆಲ್ ಅಧಿಕಾರಿಯಾದ ಸಕೀನಾ ಅವರು ತಿಳಿಸಿದ್ದಾರೆ.

‘ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಯುತವಾಗಿ ನಡೆಸಲು ಯಾವುದೇ ಚುನಾವಣೆ ಅಕ್ರಮ, ಆಮಿಷ ತಡೆಲು ಸಿವಿಜಿಲ್ ಬಳಸುವ ಮೂಲಕ ಎಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವದ ರಕ್ಷಕರಾಗೋಣ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ  ಬಳ್ಳಾರಿ  ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular