HomeKarnatakaಗಮನಿಸಿ : ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಗಮನಿಸಿ : ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸಾಲ ಸೌಲಭ್ಯವನ್ನು ಪಡೆಯಲು ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಸಿ.ಇ.ಟಿ/ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.

ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೈಬ್ ಸೈಟ್ www.kacdc.karnataka.gov.in ನಲ್ಲಿ ನವೆಂಬರ್ 30ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560 032 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ :080-23539600/ 080-23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular