ಗಮನಿಸಿ : ‘ಯುವನಿಧಿ’ ಯೋಜನೆಗೆ ಯಾರು ಅರ್ಹರು, ನೋಂದಣಿ ಹೇಗೆ..? ಏನೆಲ್ಲಾ ದಾಖಲೆ ಬೇಕು ತಿಳಿಯಿರಿ

ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಪೈಕಿ ಕರ್ನಾಟಕ ಯುವನಿಧಿ ಯೋಜನೆ ಪದವೀಧರ ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮಾಡುವ ಯೋಜನೆಯಾಗಿದೆ.

ಡಿಸೆಂಬರ್.26, 2023ರಿಂದ ನೋಂದಣಿ ಆರಂಭಗೊಳ್ಳಲಿದೆ. ಜನವರಿ.1, 2024ರಿಂದ ಯೋಜನೆ ಜಾರಿಗೊಳ್ಳಲಿದೆ. ರಾಜ್ಯ ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ್ನು ಜಾರಿಗೊಳಿಸಲಾಗಿತ್ತು. ಇದೀಗ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿಯಾಗಲಿದೆ.

ನಿರುದ್ಯೋಗಿಗಳು ಎದುರಿಸುವ ಸವಾಲುಗಳಿಗೆ ಪರಿಹಾರ ಮಾರ್ಗವಾಗಿ, ಶೈಕ್ಷಣಿಕ ಅರ್ಹತೆಗೆ ತಕ್ಕ ಉದ್ಯೋಗವನ್ನು ಕಂಡುಕೊಳ್ಳುವ ದಾರಿಯಾಗಿ ಯುವನಿಧಿ ಯೋಜನೆಯನ್ನು ಹೊಸ ವರ್ಷದ ಮೊದಲ ದಿನದಿಂದಲೇ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಗೆ ಫಲಾನುಭವಿಗಳಾಗಲು ಡಿಸೆಂಬರ್ 26ರಿಂದ ರಾಜ್ಯ ಸರ್ಕಾರದ ಅಧಿಕೃತ ಪೋರ್ಟಲ್ ಸೇವಾಸಿಂಧು ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ನೀವು ಸೇವಾಸಿಂಧು ಪೋರ್ಟಲ್ https://sevasindhu.karnataka.gov.inಗೆ ಬೇಟಿ ನೀಡಬೇಕಾಗುತ್ತದೆ.

ಯುವ ನಿಧಿ ಯೋಜನೆಯಲ್ಲಿ ಎಷ್ಟು ಹಣ ಸಿಗುತ್ತೆ..?

ಡಿಗ್ರೀ ಉತ್ತೀರ್ಣರಾದ ನಿರುದ್ಯೋಗಿಗಳಿಗೆ: ಮಾಸಿಕ 3000ರೂ.
ಡಿಪ್ಲೊಮಾ ಉತ್ತೀರ್ಣರಾದ ನಿರುದ್ಯೋಗಿಗಳಿಗೆ: ಮಾಸಿಕ 1500ರೂ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು
ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ
ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ
ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ)
ಬ್ಯಾಂಕ್ ಖಾತೆ ವಿವರ
ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

ಯಾರು ಅರ್ಹರು.?

2022-23ನೇ ಸಾಲಿನಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿದವರು ಅರ್ಹರಾಗಿರುತ್ತಾರೆ. ಆದರೇ ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರಿಗೆ ಮಾತ್ರ ಈ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಯೋಜನೆಯೆ ಮೊದಲ ಕಂತಿನ ಹಣ 2024 ರ ಜನವರಿ ತಿಂಗಳಿಂದಲೇ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಇದು 2022-23ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಹಾಗೂ ಡಿಪ್ಲೊಮ ನಿರುದ್ಯೋಗಿಗಳಿಗೆ ಅನ್ವಯವಾಗಲಿದೆ.

ಯಾರು ಅರ್ಹರಲ್ಲ

ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆದವರಿಗೆ ಈ ಯೋಜನೆಯ ಲಾಭ ದೊರೆಯುವುದಿಲ್ಲ. ಅಪ್ರೆಂಟಿಸ್ ಹುದ್ದೆಯಲ್ಲಿರುವವರಿಗೆ ಇದರ ಲಾಭ ದೊರೆಯದು. ಸರ್ಕಾರಿ ಮತ್ತು ಖಾಸಗಿ ವಲಯ ಉದ್ಯೋಗ ಪಡೆದಿರುವವರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read