ಗಮನಿಸಿ : ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿಗೆ ನ.6 ಕೊನೆಯ ದಿನ

ಬಳ್ಳಾರಿ : ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ ನಿಮಿತ್ತ ಅರ್ಹ ಪದವೀಧರರು ತಪ್ಪದೇ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ಸಹಾಯಕ ಮತದಾರರ ನೊಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಚುನಾವಣೆಯ ಕಾರ್ಯವು ಮಹತ್ವಪೂರ್ಣ ಪಾತ್ರವನ್ನು ಒಳಗೊಂಡಿರುತ್ತದೆ. ಇಂತಹ ಚುನಾವಣೆಯಲ್ಲಿ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿದ್ದಲ್ಲಿ ಮಾತ್ರ ಮುಂಬರುವ ದಿನದಲ್ಲಿ ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಪತ್ರದನ್ವಯ, ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿದ್ದು, ಈ ನೊಂದಣಿ ಪ್ರಕ್ರಿಯೆ ಅವಧಿಯು 06.11.2023 ರಂದು ಮುಕ್ತಾಯಗೊಳ್ಳಲಿದೆ.

ಈ ನೊಂದಣಿ ಪ್ರಕ್ರಿಯೆ ಪ್ರಾರಂಭಿಸಿ ಸುಮಾರು 25 ದಿನಗಳು ಗತಿಸಿದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಲು ನಿರಾಸಕ್ತಿ ತೋರಿಸುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಅರ್ಹ ಪದವೀಧರ ಅಭ್ಯರ್ಥಿಗಳು ತಮ್ಮ ಹೆಸರನ್ನು ತಪ್ಪದೇ ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

ಈ ಕ್ಷೇತ್ರದ ಎಲ್ಲಾ ಪದವೀಧರ ಪ್ರಜ್ಞಾವಂತ ಅರ್ಹ ಮತದಾರರು, ದಯಮಾಡಿ ತಾವು ತಮ್ಮ ಹತ್ತಿರದ ಸಹಾಯಕ ನೊಂದಣಾಧಿಕಾರಿಗಳ ಕಚೇರಿಯಾದ ತಹಸೀಲ್ ಕಚೇರಿ ಅಥವಾ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಮೂನೆ-18 ರ ಅರ್ಜಿಯನ್ನು ಭರ್ತಿ ಮಾಡಿ ತಾವು ಪದವೀಧರರಾಗಿರುವ ಕುರಿತಾದ ಘಟಿಕೋತ್ಸವ ಪ್ರಮಾಣ ಪತ್ರ ಅಥವಾ ಅಂತಿಮ ವರ್ಷದ ಅಂಕಪಟ್ಟಿ ಅಥವಾ ಪಾಸಿಂಗ್ ಪ್ರಮಾಣ ಪತ್ರವನ್ನು ಯಾವುದಾದರೊಂದು ದಾಖಲೆ ಹಾಗೂ ತಾವು ಸ್ಥಳೀಯ ನಿವಾಸಿಯಾಗಿರುವ ಕುರಿತು ಚುನಾವಣೆ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ವಾಸಸ್ಥಳ ಪ್ರಮಾಣ ಪತ್ರ ಇದರಲ್ಲಿ ಒಂದನ್ನು ಸಲ್ಲಿಸಿ ತಮ್ಮ ಹೆಸರನ್ನುನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read