ಗಮನಿಸಿ : ರಾಜ್ಯದಲ್ಲಿ ‘ವಿವಾಹ ನೋಂದಣಿ’ ಈಗ ಮತ್ತಷ್ಟು ಸುಲಭ, ಜಸ್ಟ್ ಈ ರೀತಿ ಮಾಡಿ

ಬೆಂಗಳೂರು : ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ.

ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.

https://kaveri.karnataka.gov.in ಭೇಟಿ ನೀಡಿ ಮತ್ತು ಬಳಕೆದಾರರ ಖಾತೆ ಸೃಜಿಸಿ ಕಾವೇರಿ ಪೋರ್ಟಲ್ಗೆ ಲಾಗಿನ್ ಮಾಡಿ, ವಿವಾಹ ನೋಂದಣಿ ಸೇವೆ ಆಯ್ಕೆಮಾಡಿ ಮತ್ತು ವಿವರ ನಮೂದಿಸಿ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ಹಂತಗಳು
1) ಮೊದಲು https://kaveri.karnataka.gov.in ಭೇಟಿ ನೀಡಿ ಮತ್ತು ಬಳಕೆದಾರರ ಖಾತೆ ಸೃಜಿಸಿ
2) ಕಾವೇರಿ ಪೋರ್ಟಲ್ಗೆ ಲಾಗಿನ್ ಮಾಡಿ, ವಿವಾಹ ನೋಂದಣಿ ಸೇವೆ ಆಯ್ಕೆಮಾಡಿ ಮತ್ತು ವಿವರ ನಮೂದಿಸಿ ಅರ್ಜಿ ಸಲ್ಲಿಸಿ
3) ಗಂಡ, ಹೆಂಡತಿ ಮತ್ತು ಮೂರು ಸಾಕ್ಷಿದಾರರ ಆಧಾರ್ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಿ
4) ನೋಂದಣಾಧಿಕಾರಿಯಿಂದ ಅರ್ಜಿ ಪರಿಶೀಲನೆ, ಆನ್ಲೈನ್ ಮೂಲಕ ಶುಲ್ಕ ಸಂದಾಯಕ್ಕೆ ಅವಕಾಶ
5) ಕಾವೇರಿ ಪೋರ್ಟಲ್ನಲ್ಲಿ ಪ್ರಮಾಣಪತ್ರವನ್ನು ಡೌನ್ಲೋಡ್ ಮಾಡಿ
( https://kaveri.karnataka.gov.in) ಹೆಚ್ಚಿನ ಮಾಹಿತಿಗಾಗಿ 080 68265316 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read