HomeKarnatakaಗಮನಿಸಿ : ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಗಮನಿಸಿ : ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದ್ದು, ಮತ್ತೆ ದಿನಾಂಕ ವಿಸ್ತರಣೆ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಆದ್ದರಿಂದ ನಿಗದಿತ ದಿನಾಂಕದೊಳಗೆ ನೀವು ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಿಕೊಳ್ಳಬಹುದು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಎರಡನೇ ಹಂತದಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೂಡ APL ಹಾಗೂ BPL ರೇಷನ್ ಕಾರ್ಡ್ ಗಳಲ್ಲಿ ಕೆಲವು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಬಾರಿ ಜಿಲ್ಲಾವಾರು ವಿಭಾಗ ಮಾಡಿ ಅವಕಾಶ ನೀಡಲಾಗಿದ್ದು, ಇಲ್ಲಿದೆ ಸಂಪೂರ್ಣ ಮಾಹಿತಿ.ಅಕ್ಟೋಬರ್ 1 ರಿಂದ 13 ರವರೆಗೆ ಜಿಲ್ಲಾವಾರು ವಿಭಾಗ ಮಾಡಿ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಕ್ಟೋಬರ್ 5 ರಿಂದ 7ರವರೆಗೆ ಅವಕಾಶ ನೀಡಲಾಗಿತ್ತು, ಈಗ ಆ ಅವಧಿ ಮುಕ್ತಾಯವಾಗಿದೆ.

ಅಕ್ಟೋಬರ್ 8 ರಿಂದ 10 ರವರೆಗೆ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ. ಚಿಕ್ಕಮಗಳೂರು, , ದಕ್ಷಿಣ ಕನ್ನಡ, ವಿಜಯಪುರ, ಧಾರವಾಡ ಗದಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ ಹಾವೇರಿ ಒಟ್ಟು 15 ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3 ನೇ ಹಂತದಲ್ಲಿ ಅಕ್ಟೋಬರ್ 11 ರಿಂದ 13 ರವರೆಗೆ ಇನ್ನುಳಿದ 14 ಜಿಲ್ಲೆಗಳಾದ ರಾಯಚೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ಕಲ್ಬುರ್ಗಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ಯಾದಗಿರಿ, ವಿಜಯನಗರ ಜಿಲ್ಲೆಗೆ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ತಿದ್ದುಪಡಿ ಮಾಡಲು ಏನೆಲ್ಲಾ ದಾಖಲೆ ಬೇಕು..?

ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular