ಬೆಂಗಳೂರು : 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ | ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಿದೆ.
ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗದಿತ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಗಿನಂತಿದೆ.



