ಶಿವಮೊಗ್ಗ : ಉದ್ಯೋಗಾಂಕ್ಷಿಗಳ ಗಮನಕ್ಕೆ…ಸೆ. 15 ರಂದು ಶಿವಮೊಗ್ಗದಲ್ಲಿ ನಿಗದಿಯಾಗಿದ್ದ ಉದ್ಯೋಗ ಮೇಳ ಮುಂದೂಡಿಕೆಯಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
