HomeLatest Newsಗಮನಿಸಿ: ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇನ್ನೂ 4 ದಿನ ಆರ್ಭಟಿಸಲಿದೆ ಮಳೆ

ಗಮನಿಸಿ: ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇನ್ನೂ 4 ದಿನ ಆರ್ಭಟಿಸಲಿದೆ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಮತ್ತು ಬುಧವಾರ ಮಧ್ಯಾಹ್ನದವರೆಗೆ ಧಾರಾಕಾರ ಮಳೆಯಾಗಿದೆ. ಇನ್ನು ನಾಲ್ಕು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 5 ದಿನ ಹಾಗೂ ಬೆಳಗಾವಿ, ಧಾರವಾಡದಲ್ಲಿ ಮೇ 22 ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ವಿಜಯಪುರ, ಕೋಲಾರದಲ್ಲಿ ಮುಂದಿನ 24 ಗಂಟೆಗಳ ಕಾಲ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಗದಗ, ಹಾವೇರಿಯಲ್ಲಿ ಮೇ 24ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲು ಮುಂದಿನ ನಾಲ್ಕು ದಿನ ಅನುಕೂಲ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular