HomeLatest Newsಗಮನಿಸಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸ್ವಯಂ ಪಾಲ್ಗೊಳ್ಳುವ ಅವಧಿ ವಿಸ್ತರಣೆ

ಗಮನಿಸಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸ್ವಯಂ ಪಾಲ್ಗೊಳ್ಳುವ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನಲೆಯಲ್ಲಿ ಆನ್‌ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಧಿಯನ್ನು ನ.10 ರವರೆಗೆ ವಿಸ್ತರಿಸಲಾಗಿತ್ತು.

 ಆದರೆ, ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್‌ಲೈನ್ ಮೂಲಕ https://kscbcselfdeclaration.karnataka.gov.in ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ಅಂತಿಮವಾಗಿ ನ.30 ರವರೆಗೆ ವಿಸ್ತರಿಸಲಾಗಿದೆ ಎಂದು ಹಾಸನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular