ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ʻಉದ್ಯೋಗ ಮೇಳʼ : ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸಮಿತಿಯ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗಿದೆ.

ನೋಂದಣಿ ಹೇಗೆ..?

ಅಭ್ಯರ್ಥಿಗಳು ಮತ್ತು ಕಂಪನಿಗಳು ಈ https://udyogamela.skillconnect.kaushalkar.com/ ವೆಬ್ಸೈಟ್ನಲ್ಲಿ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.

1) https://skillconnect.kaushalkar.com/new ಭೇಟಿ ನೀಡಿ
ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ
ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ
ಉದ್ಯೋಗ ಮೇಳ ನಡೆಯುವ ಸ್ಥಳ : ಅರಮನೆ ಮೈದಾನ, ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read