HomeKarnatakaಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿ ವೇತನʼಕ್ಕೆ ʻಆದಾಯ ಪ್ರಮಾಣ ಪತ್ರʼ ಸಲ್ಲಿಸಲು ಫೆ.29 ರವರೆಗೆ ಅವಕಾಶ

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿ ವೇತನʼಕ್ಕೆ ʻಆದಾಯ ಪ್ರಮಾಣ ಪತ್ರʼ ಸಲ್ಲಿಸಲು ಫೆ.29 ರವರೆಗೆ ಅವಕಾಶ

ಬೆಂಗಳೂರು : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ಕಲ್ಪಿಸಲಾಗಿದೆ.

 ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು 2.50 ಲಕ್ಷ ರೂ. ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ, ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ) ದಲ್ಲಿ ಫೆ. 29 ರ ಒಳಗಾಗಿ ಅಪ್‌ಲೋಡ್ ಮಾಡಬೇಕು.

 2023-24 ನೇ ಸಾಲಿನಲ್ಲಿ, ಇತರೆ ಇಲಾಖೆಗಳ (ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುವದಿಲ್ಲ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular