ಬೆಂಗಳೂರು : ದೇವನಹಳ್ಳಿ ಬಳಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ಸುಮಾರು ಎರಡು ಗಂಟೆಗಳ ಕಾಲ ಬೆಂಗಳೂರಿನಲ್ಲಿರಲಿದ್ದು, ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಹಲವಾರು ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.
ಮಧ್ಯಾಹ್ನ 2.10ಕ್ಕೆ ಕಲಬುರಗಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಸಂಜೆ 4 ಗಂಟೆಗೆ ಚೆನ್ನೈಗೆ ತೆರಳಲಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಹಲವಾರು ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲು ಸಂಚಾರ ಪೊಲೀಸರು ನಿರ್ಧರಿಸಿದ್ದು, ಪ್ರಯಾಣಿಕರಿಗೆ ಪರ್ಯಾಯ ರಸ್ತೆಗಳನ್ನು ಸೂಚಿಸಿದ್ದಾರೆ.
ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅತಿಗಣ್ಯವ್ಯಕ್ತಿಗಳ ಸಂಚರಣೆ ಇದ್ದು, ಅವರು ಸಾಗುವ ಮಾರ್ಗಗಳಲ್ಲಿ ಎಲ್ಲಾ ಮಾದರಿಯ ವಾಹನಗಳು, ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ, ಅಗತ್ಯಕ್ರಮ ಕೈಗೊಳ್ಳಲಾಗಿದ್ದು, ಸೂಕ್ತ ಸ್ಥಳಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಸಂಚಾರ ಬಂದೋಬಸ್ತ್ ಮಾಡಿಕೊಳ್ಳಲಾಗಿರುತ್ತದೆ. ವಿ.ವಿ.ಐ.ಪಿ ರವರ ಕಾರ್ಯಕ್ರಮದ ನಿಮಿತ್ತವಾಗಿ ಸಂಚಾರ ನಿರ್ಬಂಧ ಮತ್ತು ಬದಲಿ ಮಾರ್ಗಗಳ ವಿವರಗಳು ಈ ಕೆಳಗಿನಂತೆ ಇರುತ್ತದೆ.
ದಿನಾಂಕ: 19.01.2024 ರಂದು ಬೆಳಗ್ಗೆ 08:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
1. ಗೊಲ್ಲಹಳ್ಳಿ ಗೇಟ್- ಹುಣಚೂರು ಗ್ರಾಮ (ಕೆ.ಐ.ಎ.ಡಿ.ಬಿ ಇಂಡಸ್ಟ್ರೀಯಲ್ ಏರಿಯಾ)
2. ಡಾಬಾ ಗೇಟ್ (ಎನ್.ಹೆಚ್.648) ನಿಂದ ಏರ್ಪೋರ್ಟ ಕಡೆಗೆ
3. ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಿಂದ ಏರ್ ಪೋರ್ಟ್ ಕಡೆಗೆ
4. ಚಿಕ್ಕಜಾಲ ಕೋಟೆ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣ
ಮಾರ್ಗ ಬದಲಾವಣೆ ವಿವರಗಳು
1. ವೈಟ್ ಫೀಲ್ಡ್, ಕೆ.ಆರ್. ಪುರಂನಿಂದ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗೊಲ್ಲಹಳ್ಳಿ ಗೇಟ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:
ಗೊಲ್ಲಹಳ್ಳಿ ಗೇಟ್-ಬಲತಿರುವು-ಜೊನ್ನಹಳ್ಳಿ ಗೇಟ್-ಬೆಟ್ಟಿಕೋಟೆ-ರ್ಏಲೈನ್ ಡಾಬಾ-ಎಡತಿರುವು-ದೇವನಹಳ್ಳಿ ಬಸ್ ನಿಲ್ದಾಣ-ಎಡ ತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ-ದೇವನಹಳ್ಳಿ ಟೋಲ್-ಎಡ ತಿರುವು-ಕೆಂಪೇಗೌಡ ವಿಮಾನ ನಿಲ್ದಾಣ.
2. ರಾಷ್ಟ್ರೀಯ ಹೆದ್ದಾರಿ-648 ಏರ್ಲೈನ್ ಡಾಬಾ ಜಂಕ್ಷನ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಕಡೆಗೆ
ಕೆ.ಐ.ಎ.ಡಿ.ಬಿ ಇಂಡಸ್ಟ್ರೀಯಲ್ ಏರಿಯಾ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು: ಏರ್ಲೈನ್ಸ್ ಡಾಬಾ-ದೇವನಹಳ್ಳಿ ಬಸ್ ನಿಲ್ದಾಣ-ಎಡತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ- ದೇವನಹಳ್ಳಿ ಟೋಲ್-ಎಡ ತಿರುವು- ಕೆಂಪೇಗೌಡ ವಿಮಾನ ನಿಲ್ದಾಣ.
3. ಹೆಣ್ಣೂರು-ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು.
ಬಾಗಲೂರು ಗುಂಡಪ್ಪ ಸರ್ಕಲ್-ಎಡ ತಿರುವು-ರೇವಾ ಕಾಲೇಜು ಜಂಕ್ಷನ್-ಬಾಗಲೂರು ಕ್ರಾಸ್-ಬಲ ತಿರುವು- ಚಿಕ್ಕಜಾಲ-ಸಾದಹಳ್ಳಿ ಟೋಲ್-ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ
4. ಚಿಕ್ಕಜಾಲ ಕೋಟೆ ಕ್ರಾಸ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು.
ಚಿಕ್ಕಜಾಲ-ಸಾದಹಳ್ಳಿ ಟೋಲ್ – ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ 5. ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು.
ಬಾಗಲೂರು ಕಾಲೋನಿ ಬಲ ತಿರುವು – ರಜಾಕ್ ಪಾಳ್ಯ – ಎಂ.ವಿ.ಐ.ಟಿ ಕಾಲೇಜು – ಚಿಕ್ಕಜಾಲ ಬಲ ತಿರುವು – ಬಿಬಿ ರಸ್ತೆ – ಸಾದಹಳ್ಳಿ ಟೋಲ್- ಏರ್ ಪೋರ್ಟ ಪ್ರೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ
ವಿ.ಸೂ:-ಅಂತರಾಷ್ಟ್ರೀಯ ವಿಮಾಣ ನಿಲ್ದಾಣದ ಕಡೆಗೆ ಸಂಚರಿಸುವ ಪ್ರಯಾಣಿಕರು ಕಡ್ಡಾಯವಾಗಿ ಬೆಂಗಳೂರು-ಬಳ್ಳಾರಿ ಮಾರ್ಗವನ್ನು ಬಳಸಲು ಸಾರ್ವಜನಿಕರಲ್ಲಿ ಕೋರಿದೆ.
"Traffic Advisory"
"ಸಂಚಾರ ಸಲಹೆ" pic.twitter.com/HLW5Z246b8— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) January 17, 2024