ಬೆಂಗಳೂರಿಗರೇ ಗಮನಿಸಿ : ಜೂ 4 , 5 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ..!

ಬೆಂಗಳೂರು : ಜೂನ್ 4 , 5 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

. 1, 2 ಮತ್ತು 3ನೇ ಹಂತದ ಕಾವೇರಿ ನೀರು ಸರಬರಾಜು ಘಟಕಗಳನ್ನು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ಥಗಿತಗೊಳಿಸಲಾಗುವುದು ಇದರಿಂದ ನೀರಿನ ಪೂರೈಕೆ ಇರುವುದಿಲ್ಲ ಎಂದು ಜಲಮಂಡಳಿ ತಿಳಿಸಿದೆ.

1, 2 ಹಾಗೂ 3 ಹಂತಗಳ ನೀರು ಸರಬರಾಜು ಘಟಕದಲ್ಲಿ ಜೂನ್ 4 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ನೀರು ಪೂರೈಕೆ ಇರುವುದಿಲ್ಲ. ಎರಡನೇ ಹಂತದಲ್ಲಿ ಕಾವೇರಿ 4 ನೇ ಹಂತದ 1 ಮತ್ತು 2ನೇ ಫೇಸ್ನಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ಗಂಟೆವರೆಗೆ ನೀರು ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಹೀಗಾಗಿ, ಸಾರ್ವಜನಿಕರು ಅಗತ್ಯ ಪ್ರಮಾಣದ ನೀರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read