ವಾಹನ ಸವಾರರೇ ಗಮನಿಸಿ: 2023 ರ ಫೆ.11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಸಂಚಾರಿ ದಂಡದಲ್ಲಿ ಶೇ.50 ರಷ್ಟು ʼರಿಯಾಯಿತಿʼ

ರಾಜ್ಯ ಸರ್ಕಾರ ಈ ಹಿಂದೆ ನೀಡಿದ್ದ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50 ರಷ್ಟು ದಂಡ ರಿಯಾಯಿತಿಯನ್ನು ಈಗ ಮತ್ತೊಮ್ಮೆ ಜಾರಿಗೆ ತರಲಾಗಿದೆ. ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಸರ್ಕಾರದ ಆದೇಶದನ್ವಯ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು,
ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ 2023 ರ ಫೆಬ್ರವರಿ 11 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ನೀಡಲಾಗುತ್ತದೆ.

ಸೆಪ್ಟೆಂಬರ್ 9 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಇದು ಅನ್ವಯಿಸುತ್ತದೆ ಎಂದು ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read