HomeKarnatakaವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಲಾಸ್ಟ್ ಡೇಟ್

ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಲಾಸ್ಟ್ ಡೇಟ್

ಬೆಂಗಳೂರು : ನಿಮ್ಮ ವಾಹನ 2019 ರ ಏ.1 ಕ್ಕೂ ಮೊದಲು ನೋಂದಣಿಯಾಗಿದ್ದರೆ, ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿವೆ.

ಹೌದು. ಸದ್ಯ ಸರ್ಕಾರ   2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

‘HSRP’ ನಂಬರ್ ಪ್ಲೇಟ್ ನಲ್ಲಿ ಏನೇನಿರುತ್ತದೆ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ವಾಹನದ ಇಂಜಿನ್ ಸಂಖ್ಯೆ, ಚಾಸ್ಸಿ ನಂಬರ್, ರಿಜಿಸ್ಟ್ರೇಷನ್ ನಂಬರ್, ಇನ್ಶೂರೆನ್ಸ್, ಮಾಲೀಕರ ಮಾಹಿತಿ ಹಾಗೂ ಪ್ರತ್ಯೇಕ ಗುರುತಿಸಿನ ಸಂಖ್ಯೆ ಹೊಂದಿರುತ್ತದೆ . ಅಶೋಕ ಚಕ್ರ ಚಿಹ್ನೆಯ ಕ್ರೋಮಿಯಂ ಸ್ಟಿಕ್ಕರ್ ಕೂಡ ಹೊಂದಿರುತ್ತದೆ.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular