HomeKarnatakaವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ 'ಟ್ರಾಫಿಕ್ ದಂಡ' ಪಾವತಿಗೆ ಇಂದೇ ಕೊನೆಯ ದಿನ...

ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಇಂದೇ ಕೊನೆಯ ದಿನ |Traffic fine

ಬೆಂಗಳೂರು : ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮಾಡಲು ಶೇ. 50 ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಇಂದು ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬೇಕು.

ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. ಸೆಪ್ಟೆಂಬರ್ 9 ರೊಳಗೆ ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ರಿಯಾಯಿತಿ ದರದಲ್ಲಿ ದಂಡ ಕಟ್ಟೋದು ಹೇಗೆ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.
2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.
3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.
4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.
5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು.. ಹೆಚ್ಚಿನ ಮಾಹಿತಿಗಾಗಿ 080-22942883 ಅಥವಾ 080-22943381 ಅನ್ನು ಸಂಪರ್ಕಿಸಬಹುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular