HomeKarnatakaಗಮನಿಸಿ : ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಚು. ಆಯೋಗದಿಂದ ದಿನಾಂಕ ನಿಗದಿ

ಗಮನಿಸಿ : ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಚು. ಆಯೋಗದಿಂದ ದಿನಾಂಕ ನಿಗದಿ

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪ್ರಚುರಪಡಿಸಿದ್ದು ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 09-12-2023 ರವರೆಗೆ ಕಾಲಾವಧಿಯನ್ನ ಚುನಾವಣಾ ಆಯೋಗವು ನಿಗದಿಪಡಿಸಿದೆ.

ಈ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯಿಂದ ಬಾಧಿತರಾದವರು ತಮ್ಮ ಆಕ್ಷೇಪಣೆಯನ್ನು ಅವಶ್ಯಕತೆಗೆ ಅನುಗುಣವಾಗಿ ನಮೂನೆ 6, 7, 8 ನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಬಿಎಲ್ಓ ಆ್ಯಪ್ ಮೂಲಕ ಅಥವಾ https://www.nvsp.in/Web Portal ಹಾಗೂ Voter Helpline App ಮೂಲಕ ಸಲ್ಲಿಸಬಹುದಾಗಿರುತ್ತದೆ.

ಚುನಾವಣಾ ಆಯೋಗವು ಮತದಾರರ ವಿಶೇಷ ಆಂದೋಲನವನ್ನು ದಿ: 18-11-2023, 19-11-2023, 02-12-23 ಹಾಗೂ 03-12-2023 ರಂದು ನಿಗದಿಪಡಿಸಿದೆ. ಈ ದಿನಾಂಕಗಳಂದು ಮತಗಟ್ಟೆ ಮಟ್ಟದ ಅಧಿಕಾರಿಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
ಕರಡು ಮತದಾರರ ಪಟ್ಟಿಯನ್ನು ವೆಬ್ಸೈಟ್ Voter Helpline App ರಲ್ಲಿ ಪರಿಶೀಲಿಸಬಹುದಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಹಾಗೂ ಶಿವಮೊಗ್ಗ ಗ್ರಾಮಾತರ ವಿಧಾನಸಭಾ ಕ್ಷೇತ್ರ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular