HomeKarnatakaಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 , 11 ನೇ ತರಗತಿ ಪ್ರವೇಶಾತಿಗೆ ದಿನಾಂಕ...

ಪೋಷಕರೇ ಗಮನಿಸಿ : ನವೋದಯ ವಿದ್ಯಾಲಯದ 9 , 11 ನೇ ತರಗತಿ ಪ್ರವೇಶಾತಿಗೆ ದಿನಾಂಕ ವಿಸ್ತರಣೆ

ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ.

11 ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡಾ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/06/2008 ರಿಂದ 31/07/2010 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular