ವಿದ್ಯಾರ್ಥಿಗಳೇ ಗಮನಿಸಿ : ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ.!

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವೆAದು ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ. 05 ರವರೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿದಾರರು ನ.06 ರ ಒಳಗೆ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ವಿಭಾಗಕ್ಕೆ ಕಡ್ಡಾಯವಾಗಿ ನೀಡಬೇಕು. ಅರ್ಜಿ ಶುಲ್ಕ ಸಾಮಾನ್ಯ ಮತ್ತು ಓ.ಬಿ.ಸಿ ವರ್ಗದ ಅಭ್ಯರ್ಥಿಗಳಿಗೆ ರೂ.350 ಹಾಗೂ ಎಸ್.ಸಿ/ಎಸ್.ಟಿ/ ಪ್ರವರ್ಗ-01ರ ವಿದ್ಯಾರ್ಥಿಗಳಿಗೆ ರೂ.175 ನಿಗದಿಪಡಿಸಲಾಗಿದೆ. ಹಣವನ್ನು ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ ಪದನಾಮದಲ್ಲಿ ಚಲನ್ ಮೂಲಕ ಖಾತೆ ಸಂಖ್ಯೆ 54023036291 ಐಎಫ್ಎಸ್ಸಿ ಕೋಡ್ SBIN0040759 ಗೆ ಜಮಾ ಮಾಡಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read