ವಿದ್ಯಾರ್ಥಿಗಳೇ ಗಮನಿಸಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ಜ.5 ರವರೆಗೆ ವಿಸ್ತರಣೆ

ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ WWW.KSB.GOV.IN ದಲ್ಲಿ ಜೆ.ಸಿ.ಓ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ 60 ಪ್ರತಿಶತ ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2023ನೇ ಸಾಲಿನಲ್ಲಿ ಪ್ರವೇಶಾತಿ ಪಡೆದವರು ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿಯಲ್ಲಿ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 01-01-2024 ರಿಂದ 05-01-2024 ರವರೆಗೆ ವಿಸ್ತರಿಸಲಾಗಿದೆ.

ಫಲಾನುಭವಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read