ಸಾರ್ವಜನಿಕರೇ ಗಮನಿಸಿ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಫಲಾನುಭವಿ ಆಧಾರಿತವಾದ 08 ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳಿಗೆ  ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2023 ಹಾಗೂ ಅಂತಿಮ ದಿನಾಂಕ: 31-08-2023 ಆಗಿರುತ್ತದೆ.

ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಯನ್ನು ದಾಖಲಾತಿಗಳೊಂದಿಗೆ ಲಗತ್ತಿಸಿ ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕಿನ ಗ್ರಾ.ಪಂ ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿ.ಆರ್.ಡಬ್ಲ್ಯು) ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್‍ಡಬ್ಲ್ಯು) ಗಳಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಎಂಆರ್‍ಡಬ್ಲ್ಯು ದೂ.ಸಂಖ್ಯೆ : ಶಿವಮೊಗ್ಗ 9980150110, ಭದ್ರಾವತಿ 7899137243, ಶಿಕಾರಿಪುರ 9741161346, ತೀರ್ಥಹಳ್ಳಿ 9480767638, ಸಾಗರ 9535247757, ಸೊರಬ 9110493122, ಹೊಸನಗರ 9731922693 ಹಾಗೂ ಜಿಲ್ಲಾ ಅಂಗವಿಕಲರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read