ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಇದರ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಂತಹ ಸಮಯದಲ್ಲಿ ಪೊಲೀಸರು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾರ್ವಜನಿರಿಗೆ ತಿಳುವಳಿಕೆ ಹೇಳಬೇಕು. ಮಾಕ್ ಡ್ರಿಲ್ ಬಗ್ಗೆ ಪೊಲೀಸರು ಜನರಿಗೆ ಅರಿವು ಮೂಡಿಸಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.