HomeAgricultureರೈತರಿಗೆ 3101 ಕೋಟಿ ರೂ. ಕಬ್ಬಿನ ಬಿಲ್ ಬಾಕಿ ಶೀಘ್ರದಲ್ಲೇ ಬಡ್ಡಿ ಸಮೇತ ಪಾವತಿಸಲು ಸಕ್ಕರೆ...

ರೈತರಿಗೆ 3101 ಕೋಟಿ ರೂ. ಕಬ್ಬಿನ ಬಿಲ್ ಬಾಕಿ ಶೀಘ್ರದಲ್ಲೇ ಬಡ್ಡಿ ಸಮೇತ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್

ಬೆಂಗಳೂರು: ರಾಜ್ಯದ 65 ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ 3101.91 ಕೋಟಿ ರೂಪಾಯಿ ಬಾಕಿ ಇದ್ದು, ಶೀಘ್ರದಲ್ಲೇ ಹಣ ಪಾವತಿಸುವಂತೆ 33 ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ರೈತರ ಕಬ್ಬಿನ ಹಣವನ್ನು ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಬಾಕಿ ಪಾವತಿಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದು, ರಾಜ್ಯದಲ್ಲಿ 99 ಸರ್ಕಾರಿ ಕಾರ್ಖಾನೆಗಳಿವೆ. ಅದರಲ್ಲಿ 79 ಕಾರ್ಖಾನೆಗಳು ಕಾರ್ಯನಿರತವಾಗಿವೆ. 2024- 25 ನೇ ಹಂಗಾಮಿನಲ್ಲಿ 2025ರ ಫೆಬ್ರವರಿ 28ರ ಅಂತ್ಯಕ್ಕೆ ಕಬ್ಬು ಪೂರೈಕೆ ಮಾಡಿದ ರೈತರಿಗೆ 17,596.92 ಕೋಟಿ ರೂ. ಬಿಲ್ ಪಾವತಿಸಬೇಕಿತ್ತು, ಅದರಲ್ಲಿ 14,655.91 ಕೋಟಿ ರೂಪಾಯಿ ಬಿಲ್ ಪಾವತಿ ಮಾಡಲಾಗಿದೆ. ವಿಳಂಬ ಮಾಡಿರುವ ಕಾರ್ಖಾನೆಗಳು ವಿಳಂಬದ ದಿನಗಳನ್ನು ಲೆಕ್ಕ ಹಾಕಿ ಶೇ. 15 ರಷ್ಟು ಬಡ್ಡಿಯನ್ನು ರೈತರಿಗೆ ಪಾವತಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular