ಬೆಂಗಳೂರು : ರಾಜ್ಯದ 231 ಔಷಧಿ ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜೂನ್ 24, 25 ರಂದು ಮಾದಕ ವಸ್ತು ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ 279 ಔಷಧಿ ಮಳಿಗೆಗಳನ್ನು ತಪಾಸಣೆ ನಡೆಸಿದ್ದಾರೆ.
ಈ ಪೈಕಿ ನಿಯಮ ಉಲ್ಲಂಘಿಸಿದ 231 ಔಷಧಿ ಮಳಿಗೆಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಅಂತೆಯೇ, ಔಷಧ, ಕಾಂತಿವರ್ಧಕ ಅಧಿನಿಯಮ ಉಲ್ಲಂಘಿಸಿದ ಔಷಧಿ ಅಂಗಡಿಗಳ ವಿರುದ್ಧ 29 ಕೇಸ್ ದಾಖಲಿಸಿದ್ದಾರೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜೂನ್ 24, 25 ರಂದು ಮಾದಕ ವಸ್ತು ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ 279 ಔಷಧಿ ಮಳಿಗೆಗಳನ್ನು ತಪಾಸಣೆ ನಡೆಸಿದ್ದಾರೆ. ಈ ಪೈಕಿ ನಿಯಮ ಉಲ್ಲಂಘಿಸಿದ 231 ಔಷಧಿ ಮಳಿಗೆಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಅಂತೆಯೇ, ಔಷಧ, ಕಾಂತಿವರ್ಧಕ ಅಧಿನಿಯಮ ಉಲ್ಲಂಘಿಸಿದ ಔಷಧಿ ಅಂಗಡಿಗಳ ವಿರುದ್ಧ 29… pic.twitter.com/TSzNHXeyD2
— DIPR Karnataka (@KarnatakaVarthe) August 5, 2025