ಶಿವಮೊಗ್ಗ: ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ನಾಲ್ಕರಿಂದ ಐದು ಸಾವಿರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಿದ್ದು, ಸರ್ಕಾರದಿಂದಲೇ ಗೌರವ ಧನ ಪಾವತಿಸಲಾಗುವುದು. ಇದರ ಜತೆಗೆ ಸರ್ಕಾರಿ ಶಾಲೆಗಳ 12,000, ಅನುದಾನಿತ ಶಾಲೆಗಳ 6 ಸಾವಿರ ಸೇರಿ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.