HomeJobsಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 33 ಇಲಾಖೆಗಳ 5431 FDA, SDA ಹುದ್ದೆಗಳ ನೇಮಕಾತಿಗೆ ಅಧಿಸೂಚನೆ...

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 33 ಇಲಾಖೆಗಳ 5431 FDA, SDA ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | KEA Recruitment FDA/SDA

ಬೆಂಗಳೂರು:  ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಸಹಾಯಕರು ಹಾಗೂ ದ್ವೀತಿಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಇಂದು ಅಧಿಸೂಚನೆ ಹೊರಡಿಸಿದೆ.

ಇವುಗಳಲ್ಲಿ ಪದವಿ ಮತ್ತು ಪಿಯುಸಿ ಹಂತದ ಇತರ ಹುದ್ದೆಗಳೂ ಸೇರಿವೆ.

ನಾಳೆಯಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರಂಭವಾಗಲಿದ್ದು ನವೆಂಬರ್ 25 ಕೊನೆ ದಿನ. ನ.26ರೊಳಗೆ ಶುಲ್ಕ ಪಾವತಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 FDC ಹಾಗೂ 2,070 SDC ಹಾಗೂ‌ ಕಲ್ಯಾಣ ಕರ್ನಾಟಕ ವೃಂದದ 563 FDC ಹಾಗೂ 635 FDC ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳನ್ನು 2027ರ ಜನವರಿ 8, 9 , 10, 16 ಮತ್ತು 17ರಂದು ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಿವರಗಳಿಗೆ KEA ವೆಬ್ ಸೈಟ್ ನೋಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ವಿಕಲಚೇತನರ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ನ.30 ರವರೆಗೆ ಅವಧಿ ವಿಸ್ತರಣೆ

ವಿಕಲಚೇತನರ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ನವೆಂಬರ್ 30 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ವ್ಹೀಲ್ ಚೇರ್, ಸಾಧನೆ ಯೋಜನೆ ಆಧಾರಿತ ಯೋಜನೆಗಳಿಗೆ 2026-27ನೇ ಸಾಲಿನಲ್ಲಿ  ಆನ್‍ಲೈನ್ ಮೂಲಕ ಅಕ್ಟೋಬರ್ 30 ಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 15, 2026 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಹ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ https://sevaone.karnataka.gov.in/ ಪೋರ್ಟಲ್‍ನಲ್ಲಿ ನವೆಂಬರ್ 15, 2026 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 0836-2744474 ಗೆ  ಸಂಪರ್ಕಿಸಬಹದು ಎಂದು ಧಾರವಾಡ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಕಾರ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

 ಧಾರವಾಡ; ಸಹಕಾರ ರತ್ನ ಪ್ರಶಸ್ತಿ ನೀಡುವ ಸಲುವಾಗಿ 2026ನೇ ಸಾಲಿನ ಅರ್ಹರಾದ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಧಾರವಾಡ ಜಿಲ್ಲೆಯಲ್ಲಿಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿ, ಧಾರವಾಡ ಅಥವಾ ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ನಿ, ಇವರಿಗೆ ನವೆಂಬರ್ 03, 2026 ರೊಳಗಾಗಿ ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular