HomeKarnatakaನ. 24 ಸೇವಾನಿರತ ಶಿಕ್ಷಕರಿಗೆ ಟಿಇಟಿ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ

ನ. 24 ಸೇವಾನಿರತ ಶಿಕ್ಷಕರಿಗೆ ಟಿಇಟಿ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ

ಹಾವೇರಿ: ಸೇವಾನಿರತ ಶಿಕ್ಷಕರಿಗೆ ಟಿಇಟಿ ನಿಗದಿಪಡಿಸುತ್ತಿರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ನವದೆಹಲಿಯ ಜಂತರ್ ಮಂತರ್ ನಲ್ಲಿ ನವೆಂಬರ್ 24ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅಖಿಲ ಭಾರತ ಶಿಕ್ಷಕರ ಫೆಡರೇಶನ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಭಾನುವಾರ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ರಾಷ್ಟ್ರಮಟ್ಟದಲ್ಲಿ ಇದೇ ಮೊದಲ ಬಾರಿಗೆ ಪ್ರತಿಭಟನೆ ಕೈಗೊಳ್ಳಲಾಗಿದೆ. ಎಲ್ಲಾ ರಾಜ್ಯಗಳ ಶಿಕ್ಷಕ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನವೆಂಬರ್ 24 ರಂದು ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುವುದು. ನಂತರ ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ಸೇವಾನುಭವವೇ ದೊಡ್ಡ ತರಬೇತಿಯಾಗಿದೆ. ಸೇವಾ ನಿರತ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಿಗದಿಪಡಿಸುವ ನಿರ್ಧಾರ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ತೀರ್ಪು ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular