HomeKarnatakaಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯ: 8 ಜಿಲ್ಲೆಗೆ ಎಫ್‌ಎಂ

ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯ: 8 ಜಿಲ್ಲೆಗೆ ಎಫ್‌ಎಂ

“ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್ಎಂ ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ” ಎಂದು ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಎಲ್.ಮುರುಗನ್ ಹೇಳಿದರು.

ಗುರುವಾರ ಶಿವಮೊಗ್ಗದ ವಿದ್ಯಾನಗರದಲ್ಲಿ ಭದ್ರಾವತಿ ಆಕಾಶವಾಣಿಗೆ ನೂತನವಾಗಿ ಅಳವಡಿಸಲಾದ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್‌ಎಂ ಪ್ರೇಷಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

“ಭದ್ರಾವತಿ ಆಕಾಶವಾಣಿಗೆ ಇದೊಂದು ಉಡುಗೊರೆಯಾಗಿದ್ದು, ಜಿಲ್ಲೆಯ ಮೂಲೆ ಮೂಲೆ ಸೇರಿದಂತೆ 8 ಜಿಲ್ಲೆಗಳನ್ನು ತಲುಪಲಿದೆ. ರೇಡಿಯೋ ಒಂದು ಶಕ್ತಿಯುತವಾದ ಸಂವಹನ ಮಾಧ್ಯವಾಗಿದ್ದು ಕೇಂದ್ರ ಸರ್ಕಾರವು ಡಿಜಿಟಲ್ ಮತ್ತು ಸಂವಹನ ಮಾಧ್ಯಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಗುಣಮಟ್ಟ ವೃದ್ದಿಗಾಗಿ ರೂ. 2000 ಕೋಟಿ ಖರ್ಚು ಮಾಡುತ್ತಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ರೇಡಿಯೋ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅತಿ ಹೆಚ್ಚು ಜನರನ್ನು ತಲುಪುತ್ತಿದ್ದು ಶೇ.92 ಭಾಗವನ್ನು ತಲುಪುತ್ತಿರುವ ಬಹುದೊಡ್ಡ ಪ್ರಸಾರ ಮಾಧ್ಯಮವಾಗಿದೆ. ಕೇಂದ್ರವು ಕಲೆ, ಸಂಸ್ಕೃತಿ, ವಿನ್ಯಾಸ, ಚಲನಚಿತ್ರ, ಸಂಗೀತ ಮತ್ತು ಗೇಮಿಂಗ್‌ನಂತಹ ಸೃಜನಶೀಲ ಉದ್ಯಮಗಳನ್ನು ಒಳಗೊಂಡಿರುವ ಆರ್ಥಿಕ ವ್ಯವಸ್ಥೆ ಆರೆಂಜ್ ಎಕಾನಮಿಗೆ ಹೆಚ್ಚಿನ ಒತ್ತು ನೀಡುತ್ತಿದೆ” ಎಂದು ಹೇಳಿದರು.

“ರೇಡಿಯೋ ಒಂದು ಶಕ್ತಿಯುತ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮ ಮಾತ್ರವಲ್ಲದೇ ನೈಜ, ಸತ್ಯ ಮತ್ತು ಸಮರ್ಪಕವಾದ ಸುದ್ದಿ, ವಿಷಯಗಳನ್ನು ನೀಡುವ ಮೂಲಕ ಜನರ ನಂಬಿಕೆ ಉಳಿಸಿಕೊಂಡಿದೆ. ಜೊತೆಗೆ ಸ್ಥಳೀಯ ಕಲಾವಿದರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಒಂದು ವೇದಿಕೆ ನಿರ್ಮಾಣ ಮಾಡಿದೆ” ಎಂದು ಬಣ್ಣಿಸಿದರು.

“ರೇಡಿಯೋ 23 ಭಾಷೆಗಳು ಮತ್ತು 182 ಉಪಭಾಷೆಗಳಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾ, ಗಡಿನಾಡು, ಗುಡ್ಡಗಾಡು, ಮತ್ತು ದೂರದ ಪ್ರದೇಶಗಳನ್ನು ತಲುಪುತ್ತಿದೆ. ಎಲ್ಲ ವರ್ಗ ಮತ್ತು ವಯೋಮಾನ ಹಾಗೂ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಬಿತ್ತರವಾಗುತ್ತವೆ. ಆಕಾಶವಾಣಿ ಪಾಡ್‌ಕಾಸ್ಟ್ ಸಹ ಶುರುವಾಗಿದ್ದು ಕಮ್ಯುನಿಟಿ ರೇಡಿಯೋ ಸಹ ಬಹು ದೊಡ್ಡ ಪಾತ್ರ ವಹಿಸುತ್ತಿದೆ. 550 ಕಮ್ಯುನಿಟಿ ರೇಡಿಯೋ ಕೆಲಸ ಮಾಡುತ್ತಿದೆ. ಭದ್ರಾವತಿ ಆಕಾಶವಾಣಿ ಎಫ್ಎಂ 25ನೇ ಪ್ರೇಷಕವಾಗಿದ್ದು 3500 ಚ ಕಿ.ಮೀ ಅನ್ನು ಕವರ್ ಮಾಡುತ್ತದೆ” ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, “ಎಫ್ಎಂ ಪ್ರೇಷಕ ಅಳವಡಿಕೆಗೆ 2024ರ ಜನವರಿಯಲ್ಲಿ ಅಡಿಗಲ್ಲು ಹಾಕಲಾಗಿತ್ತು. ಇದೀಗ ಅದು ಸಾಕಾರಗೊಂಡಿದ್ದು ಆಕಾಶವಾಣಿ ಭದ್ರಾವತಿ ಕೇಂದ್ರ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ 101.4 ತರಂಗಾಂತರ ಎಫ್ ಎಂ ಪ್ರೇಷಕದ ಅಳವಡಿಕೆಯಿಂದಾಗಿ ಶಿವಮೊಗ್ಗದ ಸುತ್ತಲಿನ ಎಂಟು ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 1 ಕೋಟಿ ಜನರಿಗೆ ಈ ಸೇವೆ ಲಭ್ಯವಾಗುತ್ತಿದ್ದು ಭದ್ರಾವತಿ ಆಕಾಶವಾಣಿಯ ವಜ್ರ ಮಹೋತ್ಸವದ ಉಡುಗೊರೆ ಇದಾಗಿದೆ” ಎಂದು ತಿಳಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular