HomeIndiaಗೋವಾ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರಿಡಲು ನಿರ್ಧಾರ

ಗೋವಾ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರಿಡಲು ನಿರ್ಧಾರ

ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾ ಸಿಎಂ ಆಗಿದ್ದ ದಿ. ಮನೋಹರ್ ಪರಿಕ್ಕರ್ ಅವರಿಗೆ ಗೌರವ ಸೂಚಕವಾಗಿ ಗೋವಾದ ಗ್ರೀನ್‌ ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೋಪಾ, ಗೋವಾ’ ಎಂದು ಹೆಸರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗೋವಾ ರಾಜ್ಯದ ಜನತೆಯ ಆಕಾಂಕ್ಷೆಯ ಅನ್ವಯ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಮೋಪಾ ವಿಮಾನ ನಿಲ್ದಾಣಕ್ಕೆ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಸರ್ವಾನುಮತದ ನಿರ್ಧಾರ ಕೈಗೊಂಡು, ತೀರ್ಮಾವನ್ನು ಕೇಂದ್ರಕ್ಕೆ ತಿಳಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋವಾದ ಮೊಪಾದಲ್ಲಿರುವ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022 ರಲ್ಲಿ ಉದ್ಘಾಟಿಸಿದರು. ಆಧುನಿಕ ಗೋವಾವನ್ನು ನಿರ್ಮಿಸಲು ಮನೋಹರ್ ಪರಿಕ್ಕರ್ ಅವರ ಕೊಡುಗೆಯನ್ನು ಗುರುತಿಸಿ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗಿದೆ.

ಗೋವಾ ಸಂಪುಟ ಕೈಗೊಂಡ ನಿರ್ಣಯಕ್ಕೆ ಕೇಂದ್ರ ಸಂಪುಟ ಅನುಮೋದಿಸಿದೆ. ಮನೋಹರ್ ಪರಿಕ್ಕರ್ ಅವರಿಗೆ ಗೌರವ ಸೂಚಕವಾಗಿ ಗೋವಾದ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ – ಮೋಪಾ, ಗೋವಾ’ ಎಂದು ಹೆಸರಿಸಲು ಕೇಂದ್ರ ಸಚಿವ ಸಂಪುಟವು ಬುಧವಾರ ಎಕ್ಸ್-ಪೋಸ್ಟ್ ಫ್ಯಾಕ್ಟೋ ಅನುಮೋದನೆಯನ್ನು ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular