NPS – OPS ಭಾವನಾತ್ಮಕ ವಿಚಾರವೆಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು…!

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ NPS ನೌಕರರು ಹಲವು ದಿನಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳುತ್ತಿದ್ದಾರೆ.

ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರ ಸಂಘ, ತಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲವೆಂಬ ಅಸಮಾಧಾನ ಎನ್.ಪಿ.ಎಸ್. ನೌಕರರಲ್ಲಿ ಕಂಡುಬರುತ್ತಿದೆ. ಇದೀಗ ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಎನ್.ಪಿ.ಎಸ್. ಭಾವನಾತ್ಮಕ ವಿಚಾರವಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಇದರ ಜಾರಿಗಾಗಿ ಮುಂದೆ ನಿರ್ಣಾಯಕ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರಲ್ಲದೆ ಈಗ ನಡೆಯುತ್ತಿರುವ ಹೋರಾಟಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read