HomeKarnatakaಹಳೆಪಿಂಚಣಿ ಮರು ಜಾರಿ: ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಗಡುವು

ಹಳೆಪಿಂಚಣಿ ಮರು ಜಾರಿ: ಸರ್ಕಾರಕ್ಕೆ ಎನ್‌ಪಿಎಸ್ ನೌಕರರ ಗಡುವು

ದಾವಣಗೆರೆ: ಎನ್.ಪಿ.ಎಸ್. ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಎನ್‌ಪಿಎಸ್ ನೌಕರರ ಸಂಘ ಆಗ್ರಹಿಸಿದೆ.

ಭಾನುವಾರ ಶಾಂತರಾಮ ತೇಜ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಒಪಿಎಸ್ ಮರು ಜಾರಿಗೊಳಿಸಲು ಸರ್ಕಾರಕ್ಕೆ 2025ರ ಜನವರಿ 15ರವರೆಗೆ ಗಡುವು ನೀಡಲಾಗಿದೆ.

ನಿಗದಿತ ಕಾಲಾವಧಿಯಲ್ಲಿ ಸರ್ಕಾರ ಹಳೆ ಪಿಂಚಣಿ ಜಾರಿಗೊಳಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಒಪಿಎಸ್ ಜಾರಿ ಸಾಧ್ಯತೆಗಳ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿರುವ ಸಮಿತಿಯನ್ನು ವಿರೋಧಿಸಿ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ವಾನುಮತದ ಅನುಮೋದಿಸಲಾಗಿದೆ. 2025ರ ಜನವರಿ 15ರೊಳಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular