ನರೇಗಾ ಕೆಲಸದ ವೇಳೆಯಲ್ಲೇ ಹೃದಯಾಘಾತದಿಂದ ಕಾರ್ಮಿಕ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮಾಲವಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಹಗರಿಬೊಮ್ಮನಹಳ್ಳಿ ತಾಲೂಕು ನೆಲ್ಕುದ್ರಿ 2 ಗ್ರಾಮದ ಕಡ್ಲಿ ರಾಘವೇಂದ್ರ(45) ಮೃತಪಟ್ಟವರು. ಕೆಲಸದ ಸಂದರ್ಭದಲ್ಲಿ ದಿಢೀರ್ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು ತಕ್ಷಣವೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಜಿ. ಪರಮೇಶ್ವರಪ್ಪ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ನರೇಗಾ ಯೋಜನೆಯಡಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read