ಬೆಂಗಳೂರು: ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ನೃಪತುಂಗ ವಿಶ್ವವಿದ್ಯಾಲಯದಲ್ಲಿ ಏಕಾಏಕಿ ಪದವಿ ಕೋರ್ಸ್ ಗಳ ಶುಲ್ಕ ಶೇ. 30ರಿಂದ 35ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿದ್ದಾರೆ.
ನೃಪತುಂಗ ವಿಶ್ವವಿದ್ಯಾಲಯದ ಬಿಎ, ಬಿಎಸ್ ಇ, ಬಿಇಡಿ ಸೇರಿದಂತೆ ಸಾಕಷ್ಟು ಪದವಿ ಕೋರ್ಸ್ ಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ಕ್ಯಾಂಪಸ್ ನಲ್ಲಿಯೇ ವಿದ್ಯಾರ್ಥಿಗಳು ಪ್ರತಿಭಟನೆ ಕುಳಿತಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಗಳಿಲ್ಲ, ನೀರಿನ ವ್ಯವಸ್ಥೆ ಇಲ್ಲ. ಅಗತ್ಯ ಸೌಲಭ್ಯಗಳೂ ಇಲ್ಲ. ಈಗ ಏಕಾಏಕಿ ಶುಲ್ಕ ಹೆಚ್ಚಳ ಮಾಡಿರುವ ವಿಶ್ವ ವಿದ್ಯಾಲಯದ ಕ್ರಮಖಂಡನೀಯ. ತಕ್ಷಣ ಶುಲ್ಕ ಹೆಚ್ಚಲ ಕೈಬಿಡುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.