ನಾಳೆ ಪ್ರತಿಷ್ಠಿತ ಖಾಸಗಿ ಶಾಲೆಗಳ ದಾಖಲಾತಿಗೆ ಪ್ರವೇಶ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬಳ್ಳಾರಿ : ಪರಿಶಿಷ್ಟ ವರ್ಗಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳ ದಾಖಲಾತಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ಮೇ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ನಗರದ ಬೆಳಗಲ್ ಕ್ರಾಸ್ನ ಸಂತ ಜೋಸೆಫ್ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9964268268, 9900658907, 9110224569, 9986302091 ಇವರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read