HomeLatest NewsBIG NEWS: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಹತ್ಯೆ ಪ್ರಕರಣ: ಸಹೋದ್ಯೋಗಿ ಅರೆಸ್ಟ್

BIG NEWS: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಹತ್ಯೆ ಪ್ರಕರಣ: ಸಹೋದ್ಯೋಗಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಓರ್ವಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದ್ಯೋಗಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದು, ಬಂಧಿತನನ್ನು ಸುಧಾಕರ್ ಎಂದು ಗುರುತಿಸಲಾಗಿದೆ. ಈತ ಕೂಡ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ.

ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯೊಂದರಲ್ಲಿ ಮಮತಾ (39) ಎಂಬ ನರ್ಸ್ ಬರ್ಬರವಾಗಿ ಹತ್ಯೆಯಾಗಿತ್ತು. ಆಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಸ್ನೇಹಿತೆಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಎರಡು ದಿನಗಳ ಹಿಂದೆ ಸ್ನೇಹಿತೆ ಊರುಗೆ ಹೋಗಿದ್ದ ವೇಳೆ ಮಮತಾ ಮನೆಯಲ್ಲಿಯೇ ಬರ್ಬರವಾಗಿ ಕೊಲೆಯಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಮತಾಅಳ ಸಹೋದ್ಯೋಗಿ ನರ್ಸ್ ಸುಧಾಕರ್ ನನ್ನು ಬಂಧಿಸಿದ್ದಾರೆ. ಬಂಧಿತ ಸುಧಾಕರ್ ಕೂಡ ಜಯದೇವ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಸುಧಾಕರ್ ಹಾಗೂ ಮಮತಾ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಪರಿಚಯದವರೂ ಆಗಿದ್ದರು. ಮದುವೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಸುಧಾಕರ್ ಬೇರೊಂದು ಯುವತಿಯ ಜೊತೆ ವಿವಾಹಕ್ಕೆ ಸಿದ್ಧನಾಗಿದ್ದ. ಆದರೆ ಮಮತಾ ತನ್ನನ್ನು ವಿವಾಹವಗುವಂತೆ ಒತ್ತಾಯಿಸಿದ್ದಳು ಎನ್ನಲಾಗಿದೆ. ಇದರಿಂದ ಮಮತಾಳನ್ನು ಕೊಲೆಗೈದು ಪರಾರಿಯಾಗಿದ್ದ ಎಂದು ಎಂದು ತಿಳಿದುಬಂದಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular